Headlines

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ…

Read More

ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ : ಸಚಿವ ನಾರಾಯಣಗೌಡ

ಶಿವಮೊಗ್ಗ : ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ. ಏಜೆಂಟ್​ಗಳು ಮಾರ್ಕೆಟಿಂಗ್ ಕ್ರೆಡಿಟ್ ಮಾಡೋದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಸಚಿವ ನಾರಾಯಣಗೌಡ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೇನು ಈ ಕಾಯ್ದೆಗಳಿಂದ ತೊಂದರೆಯಾಗುತ್ತಿದೆ? ಪ್ರಧಾನಿ ಮೋದಿ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದಾರೆ. ಬೆಲೆ ಏರಿಕೆ ಮಾಡಿದ್ದಾರೆ ಎಂದರು. ಬಂದ್ ಮಾಡುವ ಅಗತ್ಯ ಇರಲಿಲ್ಲ. ಎಪಿಎಂಸಿ ಕಾಯ್ದೆ ರೈತರಿಗೇನು ನಷ್ಟ ಮಾಡಿಲ್ಲ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಈಗ ಸುಧಾರಣೆ ಆಗಿದೆ. ರೈತರಿಗೆ…

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ|Illegal quarrying

ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್‌ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್

ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್‌ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದ ಗಣಪತಿ ಮೆರವಣಿಗೆಯ ಸಮಯದಲ್ಲಿ ಅಚ್ಚರಿಯ ಘಟನೆ ದಾಖಲಾಗಿದೆ. ಡಿ.ಜೆ. ಸದ್ದಿನ ಅಬ್ಬರದ ನಡುವೆ ಡ್ಯೂಟಿಯಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಸ್ಥಳದಲ್ಲಿಯೇ ಕುಸಿದು ಬಿದ್ದ ಘಟನೆ ಗುರುವಾರ ಸಂಜೆ ನಡೆದಿದ್ದು, ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಸೊರಬ ಮುಖ್ಯ ರಸ್ತೆಯಲ್ಲಿ ಗಣಪತಿ ಮೆರವಣಿಗೆ ನಡೆಯುತ್ತಿದ್ದ ವೇಳೆ, ಭಾರೀ ಸೌಂಡ್ ಸಿಸ್ಟಮ್‌ನ್ನು ಬಳಸಲಾಗಿತ್ತು….

Read More
Exit mobile version