Headlines

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read More

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ರಿಪ್ಪನ್‌ಪೇಟೆಯಲ್ಲಿ ನ.25,26 ರಂದು ಕಲಾಕೌಸ್ತುಭ ಕನ್ನಡ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-ನ.27ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ

ರಿಪ್ಪನ್‌ಪೇಟೆ : ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 29ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 25 ಮತ್ತು 26 ರಂದು ಭೂಫಾಳಂ ಸಭಾ ಭವನದಲ್ಲಿ ಹಾಗೂ ನವೆಂಬರ್ 27 ರಂದು ಸಂಜೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೇಗೌಡ ಕ್ರೀಡಾಂಗಣದಲ್ಲಿ “ಆಳ್ವಾಸ್‌ ಸಾಂಸ್ಕೃತಿಕ ವೈಭವ’’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಕಾರ್ಯದರ್ಶಿ ರವಿಚಂದ್ರ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಸಂಚಾಲಕ ಎನ್.ಸತೀಶ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 25…

Read More