ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು
ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…