ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ
ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ,…