Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ
ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…