Headlines

ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಿಂದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ – ವಿಶೇಷತೆ ಏನು ಗೊತ್ತಾ..???|airport

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ….

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ಮಂಡಗದ್ಧೆಯ ಬಳಿ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಡಿಕ್ಕಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ : ಮಂಡಗದ್ದೆ ಸಮೀಪ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಅಪಘಾತ ಸಂಭವುಸಿದ್ದು 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಾರಿ ಚಾಲಕನಿಗೆ ತೀವ್ರ ಗಾಯ ಉಂಟಾಗಿದ್ದು ಆತನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕ್ರೆಬೈಲು ಮತ್ತು ಮಂಡಗದ್ದೆಯ ರಸ್ತೆ ಮಧ್ಯೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕುಂಟವಳ್ಳಿಯ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಲಾರಿ ಚಾಲಕ ಆದರ್ಶ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅವರನ್ನ ಮಣಿಪಾಲ್…

Read More

ಇದೇ ತಿಂಗಳ 27ರಂದು ಅದ್ದೂರಿಯಾಗಿ “ಕೆಳದಿ ರಾಣಿ ಚೆನ್ನಮ್ಮ ಉತ್ಸವ” : ಶಾಸಕ ಹರತಾಳು ಹಾಲಪ್ಪ

ಸಾಗರ : ಈ ತಿಂಗಳ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ವಿಚಾರವಾಗಿ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನೆಡೆಸಿದರು. ಸದರಿ ಕಾರ್ಯಕ್ರಮ ನಡೆಸಲು ಕೈಗೊಳ್ಳಬೇಕಾದ ರೂಪುರೇಷಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿದ ಶಾಸಕರು “ಕೆಳದಿ ರಾಣಿ ಚೆನ್ನಮ್ಮ ಉತ್ಸವ” ವನ್ನು ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು 25 ಲಕ್ಷ ರೂ ಅನುದಾನ ಮಂಜೂರಾತಿಯಾದ ಬಗ್ಗೆ ಮಾಹಿತಿ ನೀಡಿದ…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ಕೊನೆಗೂ ಬೋನಿಗೆ ಬಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನತೆ|theleopard

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ. ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ…

Read More

ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ – ಶಿವಮೊಗ್ಗ ನಗರ,ಗ್ರಾಮಾಂತರದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ|Congress

ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ. ಶಿವಮೊಗ್ಗದಿಂದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ….

Read More
Exit mobile version