Headlines

ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ

Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life. ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ  ರಿಪ್ಪನ್‌ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ ಹೊಸನಗರ: ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಕೆ.ಬಿ.ಮೋಹನ್…

Read More

ಸಾಗರ : ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ , 150 ಲೀ ಬೆಲ್ಲದ ಕೊಳೆ ವಶ

ಸಾಗರ : ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ತಯಾರಿಕೆಗೆ ಬಳಸುವ ಬೆಲ್ಲ ಕೊಳೆಯನ್ನು ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಸಾಗರ ತಾಲೂಕಿನ ಸುಳ್ಳೂರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹೊಲದಲ್ಲಿ ಸಂಗ್ರಹಿಸಿದ್ದ 150 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳ್ಳೂರು ಗ್ರಾಮದ ಕಾಳಿ ಕಟ್ಟೆ ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಸಂಗ್ರಹಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷಣ ಬಿನ್ ಬಸಪ್ಪ…

Read More

ರಾಜಕೀಯ ನಾಯಕರು ಪಕ್ಷ ಕಟ್ಟೋ ಕೆಲಸ ಬಿಟ್ಟು – ಊರು ಕಟ್ಟೋ ಕೆಲಸ ಮಾಡಲಿ : ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್

ರಿಪ್ಪನ್‌ಪೇಟೆ: ರಾಜಕೀಯ ಎಂಬುದು ರಾಷ್ಟ್ರೀಯ ಪಕ್ಷಗಳಲ್ಲಿ ಕೇವಲ ವೈಟ್ ಕಾಲರ್ ನಾಯಕರಿಗೆ ಸೀಮಿತವಾಗಿದ್ದು, ಬರೀ ಪಕ್ಷ ಸಂಘಟನೆಯೇ ಇವರ ದ್ಯೇಯವಾಗಿದೆ. ಇದರಿಂದ ಊರು ಅಭಿವೃದ್ಧಿ ಕಾಣಲಿಲ್ಲ ಎಂದು ತೀರ್ಥಹಳ್ಳಿಯ ಮುಂದಿನ ವಿಧಾನ ಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಜೆಡಿಎಸ್‌ ಯುವ ಮುಖಂಡ ಯಡೂರು ರಾಜಾರಾಮ್‌ ಅಸಮದಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜವಾದದ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಸಮಾಜವಾದಿ ಚಿಂತಕ ಗೋಪಾಲಗೌಡ ರವರ ಹೆಸರು ದುರ್ಬಳಕೆ ಮಾಡಿಕೊಂಡು ಎಲ್ಲಾ ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಅಧಿಕಾರದ…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More
Exit mobile version