ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್‌ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…

Read More

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ – ಹಾಲಪ್ಪ ಮತ್ತು ಆರಗ ಜ್ಞಾನೇಂದ್ರರಿಗೆ ಟಿಕೆಟ್ ಘೋಷಣೆ|BJP

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಶಿವಮೊಗ್ಗ ನಗರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್​ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್​​ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ. …

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು:

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ  ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction. ​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ,…

Read More

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More