ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident
ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…


