ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news
ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ ನಲಿಕಲಿ ತರಗತಿಯ ಶಿಕ್ಷಕ ಪಾಠ ಓದಲು ಪುಸ್ತಕ ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್ ಶಿಕ್ಷಕರ ಅಣತಿಯಂತೆ ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ ಮಲಗಿದ್ದ ಹಾವನ್ನು ಕಂಡಿದ್ದಾನೆ. ತನ್ನ ಪಕ್ಕದಲ್ಲಿ ಕುಳಿತಿದ್ದ…


