ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ
ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ…