ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬೆಳಂದೂರು ನರಸಪ್ಪ ನಿಧನ|RIP
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ನರಸಪ್ಪ(75) ರವರು ಹೃದಯ ಸಮಸ್ಯೆ ಖಾಯಿಲೆಯಿಂದ ನಿಧನರಾಗಿದ್ದಾರೆ. ಇತ್ತೀಚಿಗೆ ನರಸಪ್ಪ ರವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಂಗಳವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನರಸಪ್ಪ ರವರು ಕೆಂಚನಾಲ ಮಾರಿಕಾಂಬಾ ಜಾತ್ರಾ ಸಮಿತಿಯಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು…