ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS
ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…