ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್
ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಾತೆ ಬದಲಾವಣೆಗಾಗಿ 40 ಸಾವಿರ ರೂಪಾಯಿ ನೀಡಬೇಕು…


