Crime News | ಸಾಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಕಳ್ಳತನ..!!!
ಶಿವಮೊಗ್ಗ ಜಿಲ್ಲೆ ಸಾಗರ ಟೌನ್ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ದೂರು ಕೂಡ ದಾಖಲಾಗಿದೆ. ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್‌ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್ ಶೆಟ್ಟರ್ ಒಡೆದು ಕಳ್ಳತನ ಮಾಡಲಾಗಿದೆ. ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು,…