ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :
ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಮಾಂಗಲ್ಯ ಸರ ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…