Headlines

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More

ಕಸಾಪ ಜಿಲ್ಲಾಧ್ಯಕ್ಷರಾಗಿ ಡಿ ಮಂಜುನಾಥ್ ಆಯ್ಕೆ ಹಿನ್ನಲೆ ರಿಪ್ಪನ್ ಪೇಟೆ ಸಾಹಿತ್ಯಾಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ : ಸಾಹಿತ್ಯ ಪೋಷಕರಾದ ಹಿರಿಯ ಪತ್ರಕರ್ತ ಹಾಗೂ ಹಿರಿಯ ಸಾಹಿತಿಗೆ ಸನ್ಮಾನ

ರಿಪ್ಪನ್ ಪೇಟೆ :  ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಮಂಜುನಾಥ್ ಅವರು ಆಯ್ಕೆಯಾಗಿರುವುದಕ್ಕೆ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನ್ನಡ ಸಾಹಿತ್ಯ ಅಭಿಮಾನಿಗಳು ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮ ಆಚರಿಸಿದರು ಕನ್ನಡ ನಾಡು-ನುಡಿಗೆ ಅನೇಕ ವಿನೂತನ ಕಾರ್ಯಕ್ರಮವನ್ನು ಅಧಿಕಾರವಿಲ್ಲದೆ  ಡಿ ಮಂಜುನಾಥ್ ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯ ಹಾಗೇಯೆ ಅವರು ಜಿಲ್ಲಾ ಕಸಪಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಸಾಹಿತ್ಯ ಅಭಿಮಾನಿಗಳು ಸಂತೋಷವನ್ನು ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಶಿಕ್ಷಕ ನಟರಾಜ್ ನೇತ್ರತ್ವದಲ್ಲಿ ಆಚರಿಸಲಾಯಿತು. ಯೋಗ ಶಿಕ್ಷಕ ನಟರಾಜ್ ಮಾತನಾಡಿ, ಯೋಗಕ್ಕೆ ಪ್ರಾಚೀನ ಇತಿಹಾಸವಿದೆ. ದೈಹಿಕ, ಮಾನಸಿಕ ಆರೋಗ್ಯ ಮಾತ್ರವಲ್ಲದೆ ಆಧ್ಯಾತ್ಮಿಕ ಅನುಭವವನ್ನು ಯೋಗ ನೀಡುತ್ತದೆ. ಧ್ಯಾನ, ಪ್ರಾಣಾಯಾಮ ಸೇರಿದಂತೆ ಯೋಗದ ಸರಳ ಆಸನಗಳನ್ನು ಪ್ರತಿನಿತ್ಯ ಮಾಡುವುದರಿಂದ ದೇಹದಲ್ಲಿನ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಹೆಚ್ಚು ಶಾಂತಿ, ನೆಮ್ಮದಿ ಉಂಟು ಮಾಡುತ್ತದೆ, ವ್ಯಕ್ತಿಯ…

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More

ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…

Read More

ಪತ್ರಿಕಾ ರಂಗವು ಸಾರ್ವಜನಿಕರ ಧ್ವನಿಯಾಗಿ ಅವರ ಕುಂದು ಕೊರತೆಗಳನ್ನು ಸರ್ಕಾರಕ್ಕೆ ತಿಳಿಸುವಂತಾಗಬೇಕು : ಆರಗ ಜ್ಞಾನೇಂದ್ರ

ಹೊಸನಗರ : ಇಂದಿನ ದಿನದಲ್ಲಿ ಗ್ರಾಮೀಣ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದು.. ಇಲ್ಲಿಯ ವರದಿಗಳು ರಾಜ್ಯಮಟ್ಟದ ಪತ್ರಿಕೆಗಳ ಮುಖಪಟದಲ್ಲಿ ಮನ್ನಣೆ ಪಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು. ಭಾನುವಾರದಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹೊಸನಗರ ತಾ. ಶಾಖೆ, ಇವರಿಂದ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಆಯೋಜಿಸಿದ್ದ, ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನತಂತ್ರ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಎಂಬಂತೆ ಪತ್ರಿಕಾ ರಂಗವು 4 ನೇ ಅಂಗವಾಗಿದೆ….

Read More
error: Content is protected !!