ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯ – ಸಂಸದ ಬಿ ವೈ ರಾಘವೇಂದ್ರ|press day
ಶಿವಮೊಗ್ಗ : ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯವಾಗಿರುತ್ತದೆ. ನಕಾರಾತ್ಮಕ ವರದಿಗಾರಿಕೆ ಮಾಡುವವರನ್ನು ಸಮಾಜ ಒಪ್ಪುವುದಿಲ್ಲ. ಸಮಾಜಮುಖಿಯಾದ ಸಕಾರಾತ್ಮಕ ಪತ್ರಿಕೋದ್ಯಮಕ್ಕೆ…