ತೀರ್ಥಹಳ್ಳಿ ಪಟ್ಟಣದ ತುಡ್ಕಿಯಲ್ಲಿ ಕಾಣಿಸಿಕೊಂಡ ಚಿರತೆ – ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ|leopard
ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ. ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು…