ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news
ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು. ರಿಪ್ಪನ್ ಪೇಟೆ : ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …


