ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP

ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ  ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್‌ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station. ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ…

Read More

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲ ಕೃಷ್ಣ | GKB

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ  : ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ…

Read More

ಅವಧೂತ ವಿನಯ್ ಗುರೂಜಿ ಜನ್ಮ ದಿನೋತ್ಸವದ ಅಂಗವಾಗಿ ನಡೆದ ರಕ್ತದಾನ ಶಿಬಿರ ಯಶಸ್ವಿ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಡಿವೈಎಸ್ಪಿ ಶಾಂತವೀರ ಉದ್ಘಾಟನೆ ಮಾಡಿದರು. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದ, ಪುನೀತ್ ಬ್ರಿಗೇಡ್, ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮ ಸಂಸ್ಥೆ, ರೋಟರಿ ಬ್ಲಡ್ ಬ್ಯಾಂಕ್, ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿ ಸಹಯೋಗದಲ್ಲಿ ನಡೆದ ರಕ್ತದಾನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೂಡ ಭಾಗವಹಿಸಿ ರಕ್ತದಾನಿಗಳಿಗೆ ಶುಭ ಕೋರಿದರು….

Read More

ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಭೂ ವಿಜ್ಞಾನ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ : ಎರಡು ಲಾರಿ,ಎರಡು ಜೆಸಿಬಿ ವಶಕ್ಕೆ..!!

ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕಲ್ಲು ಗಣಿಗಾರಿಕೆಗಳು ತಾರಕಕ್ಕೇರಿದ್ದು ಅದರಂತೆ ಶಿವಮೊಗ್ಗದ ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ನವೀನ್ ವಿ.ಎಸ್ ನೇತೃತ್ವದ ತಂಡ ನಂಜವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ತುಂಬಿದ ಎರಡು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೇಯೆ ಆನಂದಪುರದಲ್ಲಿ ಅಕ್ರಮ ಜಂಬಿಟ್ಟಿಗೆ ನಡೆಸುತ್ತಿದ್ದ ಗಣಿಗಾರಿಕೆಗೆ ನುಗ್ಗಿ ಅಕ್ರಮಕ್ಕೆ ಬಳಸಿದ್ದ ಎರಡು ಜೆಸಿಬಿ ವಶ ಪಡಿಸಿಕೊಂಡು ಒಟ್ಟು ಎರಡು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಮರಳು ಮಾಫ಼ಿಯಾ ನಡೆಸುವವರಿಗೆ ಎಚ್ಚರಿಕೆ: ಹೊಸನಗರ ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ರಿಪ್ಪನ್ ಪೇಟೆ:ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರ ಗುರುಸ್ಮರಣೆ

ರಿಪ್ಪನ್ ಪೇಟೆ : ಇಲ್ಲಿಯ ಗೌಡಸಾರಸ್ವತ ಕಲ್ಯಾಣ ಮಂದಿರದಲ್ಲಿ ಮಂಗಳವಾರದಂದು ಗೌಡ ಸಾರಸ್ವತ ಸಮಾಜ ಬಾಂಧವರು ಸಭೆ ಸೇರಿ ಸೋಮವಾರ ಹರಿಪಾದ ಸೇರಿದ ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ  ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆರ್ ಸ್ವಾಮೀಜಿಯವರ ಪುಣ್ಯಸ್ಮರಣ ಕಾರ್ಯಕ್ರಮ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ  ಮಂಜುನಾಥ ಕಾಮತ್ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜ ಸ್ಥಾಪನೆಗೆ  ಪೂಜ್ಯರು ಕಾರಣರಾಗಿದ್ದನ್ನು ಸ್ಮರಿಸಿದರು. ಪೂಜ್ಯರ ಮಠಕ್ಕೂ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜಕ್ಕೂ ಅನೇಕ ಕಾಲದಿಂದಲೂ…

Read More