ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…


