ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer
ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…