ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…