ಆಯನೂರು ಕ್ಯಾಷಿಯರ್ ಕೊಲೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ – ಆರೋಪಿಗಳ ಕಾಲಿಗೆ ಗುಂಡು|shot
ಆಯನೂರಿನ ನವರತ್ನ ಬಾರ್ ನಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ, ಆರೋಪಿಗಳನ್ನ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಸತೀಶ್ ಹಲ್ಲೆ ಮಾಡಲು ಮುಂದಾಗಿದ್ಧಾನೆ. ಈ ವೇಳೆ ಪೊಲೀಸರು ರಕ್ಷಣಾತ್ಮಕವಾಗಿ ಆತನ ಕಾಲಿಗೆ ಗುಂಡು ಹೊಡೆದಿದ್ಧಾರೆ. ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್ಐ ರಾಜು ರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್ನನ್ನ ಬಂಧಿಸಲು…