ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ
ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…


