ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident
ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್ ಜಂಪ್ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ ಕಾಲ ಟ್ರಾಫಿಕ್…


