ರಿಪ್ಪನ್‌ಪೇಟೆ – ಅಗಲಿದ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಜನಸಾಗರ|Procession – body
ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು. ಇಂದು ಮುಂಜಾನೆ 4 ಗಂಟೆಗೆ ಪಾರ್ಥಿವ ಶರೀರ ಶಬರೀಶನಗರದ ಸ್ವಗೃಹಕ್ಕೆ ಆಗಮಿಸಿದ್ದು,ಯೋಧ ಸಂದೀಪ್ ಅವರ ಪಾರ್ಥಿವ ಶರೀರ ಮನೆ ತಲುಪುತ್ತಿದ್ದಂತೆ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು.ಅಲ್ಲಿ ಸೇರಿದ್ದ ಜನರ ಕಣ್ಣುಗಳು ಕೂಡ ತೇವಗೊಂಡವು. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು….