Headlines

ಆಯನೂರಿನಲ್ಲಿ‌ ಮೋದಿ ಹವಾ – ಕುವೆಂಪು , ಸಿಗಂಧೂರು ದೇವಿಯನ್ನು ನೆನೆದ ನಮೋ : ಮಲೆನಾಡಿನ ಮಡಿಲು ಸೌಂದರ್ಯದ ಹೊನಲು ಎಂದು ಬಣ್ಣನೆ|modi

ಆಯನೂರಿನಲ್ಲಿ ಇಂದು ಮೋದಿ ಹವಾ , ಮತಬೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತೊಡಗಿದ್ದಾರೆ. ಕುವೆಂಪು, ಸಿಗಂಧೂರು ದೇವಿಯನ್ನು ನೆನೆದಂತಹ ನರೇಂದ್ರ ಮೋದಿಯವರು, ಶಿವಮೊಗ್ಗ ಜನತೆಗೆ ನಮಸ್ಕಾರ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತಬೇಟೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಇಷ್ಟೊಂದು ಜನರನ್ನು ನೋಡಿದ್ರೆ ಸಂತೋಷವಾಗುತ್ತಿದೆ. ರೋಡ್ ಶೋ ನಲ್ಲಿ ಹೂ ಮಳೆ ಸುರಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲಿ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಹಾಲಪ್ಪನವರಿಗೆ ಬೆಂಬಲಿಸಿ ಪಕ್ಷ ದ್ರೋಹ ಮಾಡುವ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ – ಕಾಗೋಡು ತಿಮ್ಮಪ್ಪ|congress

ಹಾಲಪ್ಪನವರಿಗೆ ಬೆಂಬಲಿಸಿ ಪಕ್ಷ ದ್ರೋಹ ಮಾಡುವ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಕಾಗೋಡು ತಿಮ್ಮಪ್ಪನವರು ನನಗೆ ಅಶೀರ್ವಾದ ಮಾಡಿ ಬಾಹ್ಯ ಬೆಂಬಲ ನೀಡಿದ್ದಾರೆಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರದು ಮೂರ್ಖತನದ ಪರಮಾವಧಿ  ಎಂದು ಹೇಳಿ ಅಂತಹ ಕೀಳು ಮಟ್ಟದ ವ್ಯಕ್ತಿತ್ವ  ನನ್ನದಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ತರವಾಗಿ ಖಂಡಿಸಿದರು. ಹೆದ್ದಾರಿಪುರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿ ಮಾತನಾಡಿ ಈ ಭಾರಿಯ ಚುನಾವಣೆಯಲ್ಲಿ…

Read More

ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More

ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಶಿವಮೊಗ್ಗದಲ್ಲಿ ನಡೆದ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮದಲ್ಲಿ ಮಕ್ಕಳ ಬಳಕೆ – ದೂರು ದಾಖಲು|amith-sha-rally

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ…

Read More

ರಿಪ್ಪನ್‌ಪೇಟೆ – ಅಬೂಬಕರ್ ಸಾಬ್ ನಿಧನ|Rpet

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ನಿವಾಸಿ ಅಬೂಬಕರ್ ಸಾಬ್(78) ನಿಧನರಾಗಿದ್ದಾರೆ. ಸ್ವಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಗುರುವಾರ ಮಧ್ಯರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರರಾದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಸದಸ್ಯ ಅಬ್ದುಲ್‌ ಖುದ್ದೂಸ್, ಪತ್ನಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More
Exit mobile version