ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri
ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…