ಶಿವಮೊಗ್ಗ ವಿಮಾನ ನಿಲ್ದಾಣ ಶೀಘ್ರದಲ್ಲೇ ಲೋಕಾರ್ಪಣೆ : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ವಿಮಾನ ನಿಲ್ದಾಣವು ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ 2ನೇ ಅತಿ ಉದ್ದದ ರನ್ ವೇ ಹೊಂದಿರುವಂತ ವಿಮಾನ ನಿಲ್ದಾಣ ಇದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಸದ ಬಿ.ವೈ.ರಾಘವೇಂದ್ರ, ಇಂದು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿ ಮಾಡಿದ್ದೇನೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ…

Read More

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

ಭದ್ರಾವತಿ : KSRTC ಬಸ್ ನಿಲ್ದಾಣಕ್ಕೆ ಎಂ ಜೆ ಅಪ್ಪಾಜಿ ಹೆಸರಿಡಲು ಆಗ್ರಹ

ಭದ್ರಾವತಿ: ನಗರದ ಕೆಎಸ್‌ಆರ್‌ ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿ: ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣ ಗೊಳಿಸುವಂತೆ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾ ಣಕ್ಕೆ ಅಗತ್ಯವಿರುವ  ಅನುದಾನ ಶೀಘ್ರ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಸಚಿವ ಕೆ.ಎಸ್ ಈಶ್ವರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮೂರು ಬಾರಿ ಶಾಸಕರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಎಲ್ಲಾ ವರ್ಗದ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿರುವ ದಿ: ಎಂ.ಜೆ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…

Read More

ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಭೂ ವಿಜ್ಞಾನ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ : ಎರಡು ಲಾರಿ,ಎರಡು ಜೆಸಿಬಿ ವಶಕ್ಕೆ..!!

ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕಲ್ಲು ಗಣಿಗಾರಿಕೆಗಳು ತಾರಕಕ್ಕೇರಿದ್ದು ಅದರಂತೆ ಶಿವಮೊಗ್ಗದ ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ನವೀನ್ ವಿ.ಎಸ್ ನೇತೃತ್ವದ ತಂಡ ನಂಜವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ತುಂಬಿದ ಎರಡು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೇಯೆ ಆನಂದಪುರದಲ್ಲಿ ಅಕ್ರಮ ಜಂಬಿಟ್ಟಿಗೆ ನಡೆಸುತ್ತಿದ್ದ ಗಣಿಗಾರಿಕೆಗೆ ನುಗ್ಗಿ ಅಕ್ರಮಕ್ಕೆ ಬಳಸಿದ್ದ ಎರಡು ಜೆಸಿಬಿ ವಶ ಪಡಿಸಿಕೊಂಡು ಒಟ್ಟು ಎರಡು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಮರಳು ಮಾಫ಼ಿಯಾ ನಡೆಸುವವರಿಗೆ ಎಚ್ಚರಿಕೆ: ಹೊಸನಗರ ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ…

Read More

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More