ಬರ್ತ್ ಡೇ ಪಾರ್ಟಿಯಲ್ಲಿ ನಾಲ್ವರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಪ್ರಕರಣ ದಾಖಲು|assault
ಭದ್ರಾವತಿಯಲ್ಲಿ ಹುಟ್ಟುಹಬ್ಬದ ಪಾರ್ಟಿ ವೇಳೆ ಯುವಕರ ಗುಂಪಿನ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ನಾಲ್ವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಭದ್ರಾವತಿಯ ಸಾಗರ, ನಾಗ ಪವನ್, ತೇಜಸ್, ಚೇತನ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೇಜಸ್ ಎಂಬುವವರ ಸ್ನೇಹಿತರೊಬ್ಬರ ಪತ್ನಿಯ ಹುಟ್ಟುಹಬ್ಬದ ಪಾರ್ಟಿಯನ್ನು ಶಿವಮೊಗ್ಗದ ಸೋಷಿಯಲ್ ಹಾರ್ಬರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು. ರಾತ್ರಿ 11.30ರ ಹೊತ್ತಿಗೆ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಗುಂಪೊಂದು ಏಕಾಏಕಿ ಚೇತನ್ ಎಂಬಾತನ ಮೇಲೆ ಹಲ್ಲೆ ನಡೆಸಲು…


