ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ
ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…