ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….