ಸಾಗರ : ಜೈನಮುನಿ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ|Protest
ಬೆಳಗಾವಿ ಜಿಲ್ಲೆಯ ಚಿಕ್ಕೂಡಿ ತಾಲೂಕಿನ ಹಿರೇಕೊಡಿ ನಂದಿ ಪರ್ವತದ ಜೈನ್ ಮಂದಿರದ ಆಚಾರ್ಯ 108 ಕಾಮಕುಮಾರ ನಂದಿ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಖಂಡಿಸಿ ಇಂದು ಸಾಗರದಲ್ಲಿ ಬಿಜೆಪಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಸರ್ವಸಂಗ ಪರಿತ್ಯಾಗಿಗಳಾಗಿರುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಅಲ್ಲದೇ ಅವರ ಹತ್ಯೆ ನಡೆದು ಮೂರು ದಿನವಾಗಿದ್ದು, ಸರ್ಕಾರ ಇನ್ನೂ ಸರಿಯಾದ ರೀತಿಯಲ್ಲಿ ತನಿಖೆ…