ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…