ರಿಪ್ಪನ್ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard
ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ. ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ : ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…