ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH
ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…