ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

ಆಂಬ್ಯುಲೆನ್ಸ್ ಮತ್ತು ಬೈಕ್‌ ನಡುವೆ ಡಿಕ್ಕಿ – ಯುವಕ ಸ್ಥಳದಲ್ಲಿಯೇ ಸಾವು|accident

ಬೈಕ್ ಮತ್ತು ಆಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ನ್ಯಾಮತಿ ತಾಲೂಕಿನ ಪುನೀತ್(26) ಅಲಿಯಾಸ್ ಕುಲ್ಡ ಪುನೀತ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಆಯನೂರಿನ ಚೆನ್ನಳ್ಳಿ ಕ್ರಾಸ್ ಬಳಿ ಸಾಗರದಿಂದ ಬರುತ್ತಿದ್ದ ಸರ್ಕಾರಿ ಅಂಬ್ಯುಲೆನ್ಸ್  ಬೈಕ್ ಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದಿಂದ ಆಯನೂರು ಮೂಲಕ ಬೆಳಗುತ್ತಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪುನೀತ್ ಬೆಳಗುತ್ತಿಯಲ್ಲಿ  ಕೋಳಿ ಮಾಂಸದ ಅಂಗಡಿ ನಡೆಸುತಿದ್ದರು ಎನ್ನಲಾಗುತ್ತಿದೆ….

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ವಿನಯಶೀಲತೆ, ಧಾರ್ಮಿಕತೆ ಮತ್ತು ಕುಟುಂಬಮುಖಿ ಸ್ವಭಾವಕ್ಕಾಗಿ ಪರಿಚಿತರಾಗಿದ್ದ ಪುಣ್ಯವತಿ ರವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ಪತಿಯ ರಾಜಕೀಯ ಜೀವನಕ್ಕೆ ನಿಶ್ಶಬ್ದ ಶಕ್ತಿಯಾಗಿ ನಿಂತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಟುಂಬದಲ್ಲಿ ಅವರು ಎಲ್ಲರನ್ನೂ ಒಗ್ಗೂಡಿಸುವ ಅಸ್ತಿತ್ವವಾಗಿದ್ದರು. ಸರಳತೆ, ಸತ್ಯನಿಷ್ಠೆ ಮತ್ತು ಕುಟುಂಬ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದ ಪುಣ್ಯವತಿ…

Read More

ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್​ ಕಿತ್ತವನಿಗೆ ಬಿತ್ತು ‌ಗೂಸಾ

ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್​ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್​ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್​ಬಾಲ್​ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್​ ರಾಜಕುಮಾರ್​ ಅವರ ಬೃಹತ್​ ಫ್ಲೆಕ್ಸ್​ ಹಾಕಲಾಗಿತ್ತು. ಈ ವೇಳೆ ಆನಂದ್​ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್​ರ ಫ್ಲೆಕ್ಸ್​ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….

Read More

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ ; ಜೈಲುಪಾಲಾದ ಯುವಕ

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ…

Read More

ರಿಪ್ಪನ್‌ಪೇಟೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ – ಪಂಚಾಯಿತಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs. ರಿಪ್ಪನ್‌ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ…

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಆಗುಂಬೆ ಘಾಟಿಯಲ್ಲಿ ಶಾಲಾ ಮಕ್ಕಳಿದ್ದ ಸ್ಕೂಲ್ ಬಸ್ ಅಪಘಾತ|accident

ಆಗುಂಬೆ ಘಾಟಿಯಲ್ಲಿ ಶಾಲಾ ಮಕ್ಕಳಿದ್ದ ಸ್ಕೂಲ್ ಬಸ್ ಅಪಘಾತ ತೀರ್ಥಹಳ್ಳಿ: ಬೆಂಗಳೂರಿಂದ ಪ್ರವಾಸ ಬಂದಿದ್ದ ಶಾಲಾ ವಾಹನವೊಂದು ಶೃಂಗೇರಿಯಿಂದ ಕೊಲ್ಲೂರು ಹೋಗುವಾಗ ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾದ ಘಟನೆ ಸಂಭವಿಸಿದೆ. ಆಗುಂಬೆ ಘಾಟಿಯ ಸೂರ್ಯಾಸ್ತಮಾನ ಜಾಗದ ಸಮೀಪ ಮೊದಲ ತಿರುವಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಘಾಟಿ ಕೆಳಗೆ ಬೀಳುವ ಹಂತಕ್ಕೆ ಹೋಗಿದೆ.ಅತೀ ವೇಗದ ಕಾರಣ ನಿಯಂತ್ರಣ ತಪ್ಪಿದ್ದು ಸ್ಕೂಲ್ ಬಸ್ ನಲ್ಲಿ ಶಾಲಾ ಮಕ್ಕಳು ಸೇರಿದಂತೆ 30 ಜನರು ಇದ್ದರು…

Read More