ರಿಪ್ಪನ್‌ಪೇಟೆ : ಸರ್ಕಾರಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಜೆಪಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಆರೋಪ – ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ|protest
ರಿಪ್ಪನ್‌ಪೇಟೆ : ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ವಸತಿಗೃಹದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ “ಭಾರತೀಯ ಜನತಾ ಪಕ್ಷ ಹೊಸನಗರ ಮಂಡಲ ಮಹಿಳಾ ಮೋರ್ಚ ವಿಜಯ ಸಂಕಲ್ಪ ಅಭಿಯಾನ ದಿನಾಂಕ 27 ರ ಶುಕ್ರವಾರ ರಿಪ್ಪನ್‌ಪೇಟೆಯ ಬಿಸಿಎಂ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಹಾಗೂ ಸುಮಾರು 31 ಸದಸ್ಯತ್ವ ನೋಂದಣಿ ಮಾಡಿಸಲಾಯಿತು” ಎಂಬ…