ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…


