ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru
ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದ ನಿಯಾಮವಳಿಯಂತೆ ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ರಾಜ್ಯ ರಾಜಕಾರಣದಲ್ಲಿ ರಂಗುರಂಗಿನ ವ್ಯಕ್ತಿತ್ವ,ನೇರ ನುಡಿಯ ಮೂಲಕ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗ್ರಾಮೀಣ ಪ್ರದೇಶದಿಂದ ಹಿಡಿದು ನಗರ ಪ್ರದೇಶದವರೆಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೇಳೂರು ಗೋಪಾಲಕೃಷ್ಣ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ…


