ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…