ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet
ರಿಪ್ಪನ್‌ಪೇಟೆ : ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್…