ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಸಾಗರ ಪೊಲೀಸರು :

ಸಾಗರ: ಟೌನ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಚಂದ್ರ ಬಳೆಗಾರ್  ತಂದೆ ಲೇಟ್, ಅಣ್ಣಪ್ಪ, 28 ವರ್ಷ, ಸೆಂಟಿಂಗ್ ಕೆಲಸ ವಾಸ ಉಳವಿ ಗ್ರಾಮ ಸೊರಬ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ವಿಚಾರಣೆ ಮಾಡಿದಾಗ, ಆರೋಪಿತನು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳನ್ನು ಕಳ್ಳತನ ಮಾಡಿದ್ದಾಗಿ ಹೇಳಿಕೆ ನೀಡಿದ್ದರಿಂದ, ಆರೋಪಿತನನ್ನು…

Read More

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ | Kenchanala – jathre ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ

ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್​ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…

Read More

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…

Read More

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….

Read More
Exit mobile version