ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident
ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…


