ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp
ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…