ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಚ್ಚಿ ಸಾವು

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ.ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಜೀವ ರಕ್ಷಿಸಲು ಪ್ರಯತ್ನ ಪಟ್ಟ ಕೆಳದಿ ಅಬ್ಬಾಸ್ ನೋವಿನ ಮಾತು ಬಾಲಕಿಯ…

Read More

ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ ಮೆಚ್ಚುಗೆಗೆ ಬಿಜೆಪಿ ಪಾತ್ರವಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ|BJP

ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ  ಮೆಚ್ಚುಗೆಗೆ ಬಿಜೆಪಿ ಪಾತ್ರ ಆಗುತ್ತಿದೆ – ಗೃಹಸಚಿವ ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅತ್ಯಂತ ಸಂತೋಷದಾಯಕವಾದ ದಿನ, ನಮ್ಮ ಇಶಾನ್ಯ ರಾಜ್ಯಗಳಲ್ಲಿ ಮೂರು ರಾಜ್ಯದಲ್ಲಿ ಚುನಾವಣೆ ನೆಡೆದಿತ್ತು. ಇಂದು ಫಲಿತಾಂಶ ಹೊರ ಬಂದಿದೆ. ಮೂರರಲ್ಲಿ ಎರಡು ಸ್ಪಷ್ಟ ಬಹುಮತವನ್ನು ಪಡೆದು ತನ್ನ ರಾಜ್ಯಭಾರ ಮಾಡಲು ಸಜ್ಜಾಗಿದೆ. ಇನ್ನೊಂದು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಕೊಪ್ಪ ಸರ್ಕಲ್ ನಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮ…

Read More

“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ

ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್‌ ಚಾನೆಲ್ಲಿನಲ್ಲಿ ರಾಜದೀಪ್‌ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ!  ರಾಜದೀಪ್‌ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್‌ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.   ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ಸಾಗರದ ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಎಂಟು ಕೆ.ಜಿ ತೂಕದ ಗಡ್ಡೆ…!!!! ಯಶಸ್ವಿಯಾದ ಸಾಗರ ವೈದ್ಯರ ಶಸ್ತ್ರಚಿಕಿತ್ಸೆ

ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಬುಧವಾರ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 50 ವರ್ಷದ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಇದೊಂದು ಅಂಡಾಶಯದ ಗಡ್ಡೆಯಾಗಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.  ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು,ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞೆ ಸುಷ್ಮಾ ಪತ್ತಾರ್,ನರ್ಸ್ ಸುವರ್ಣ,ರೋಹಿನಿ ಹಾಗೂ ಚಂದ್ರು  ಸಹಕರಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಮಹಿಳೆಯ ಪ್ರಾಣ ಉಳಿಸಿದ ಡಾ.ನಾಗೇಂದ್ರಪ್ಪ…

Read More

ಶಿವಮೊಗ್ಗ : ಶೌಚಾಲಯದ ಗುಂಡಿಯಲ್ಲಿ ಹಸುಗೂಸಿನ ಶವ ಪತ್ತೆ :

ಶಿವಮೊಗ್ಗ : ಶೌಚ ಗುಂಡಿಯಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹೊಳೆಹೊನ್ನೂರಿನ ಸಿದ್ದರ ಕಾಲೋನಿಯಲ್ಲಿ ನಡೆದಿದೆ. ಸಿದ್ದರ ಕಾಲೋನಿಯ ಮಹದೇವ ಎಂಬುವ ವ್ಯಕ್ತಿ ಮನೆಯ ಹಿಂಬದಿಯಲ್ಲಿ  ಶೌಚಾಲಯದ ಉದ್ದೇಶಕ್ಕಾಗಿ ಗುಂಡಿ ತೆಗೆಯಿಸಲಾಗಿತ್ತು.ಮಳೆ ಬಂದ ಹಿನ್ನಲೆಯಲ್ಲಿ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಇಂದು ಈ ಗುಂಡಿಯ ನೀರಿನಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ತೇಲುತ್ತಿರುವುದು ಮಹದೇವ ಎನ್ನುವವರಿಗೆ ಕಾಣಿಸಿದೆ. ಮಗುವಿನ ಜನನವನ್ನ ಮುಚ್ಚಿಡಲು ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.  ಮಗು ಜೀವಂತವಾಗಿರುವಾಗಲೇ ಗುಂಡಿಗೆ ಎಸೆಯಲಾಗಿದೆಯೋ ಅಥವ ಸಾಯಿಸಿ ಎಸೆಯಲಾಗಿದೆಯೋ ಎಂದು ಇನ್ನಷ್ಟೆ…

Read More

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ HOSANAGARA| Former MLA B. Swami Rao’s hunger strike ends ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ…

Read More
Exit mobile version