ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ
ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…