ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery
ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…